ರಾಂಚಿ: ತಮ್ಮ ಮನೆ ಮಗಳ ಮೇಲೆ ಅತ್ಯಾಚಾರ ನಡೆಸಿದ ಇಬ್ಬರು ಕಾಮುಕರನ್ನು ಸಂತ್ರಸ್ತೆಯ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಬೆಂಕಿ ಹಚ್ಚಿ ಸಜೀವ ದಹನ ಮಾಡಿದ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ.ಸಂತ್ರಸ್ತ ಅಪ್ರಾಪ್ತ ಬಾಲಕಿ ತನ್ನ ತಂದೆಯೊಂದಿಗೆ ಮದುವೆಯೊಂದಕ್ಕೆ ಹೋಗಿ ವಾಪಸ್ ಬರುತ್ತಿದ್ದಳು. ಬಸ್ ನಿಲ್ದಾಣದಲ್ಲಿ ಎಷ್ಟು ಕಾದರೂ ಬಸ್ ಬರದೇ ಇದ್ದಾಗ ಅದೇ ದಾರಿಯಲ್ಲಿ ಬೈಕ್ ನಲ್ಲಿ ಬರುತ್ತಿದ್ದ ಆರೋಪಿಗಳ ಬಳಿ ಮಗಳನ್ನು ಊರಿಗೆ ಡ್ರಾಪ್ ಮಾಡಲು ತಂದೆ ವಿನಂತಿಸಿದ್ದರು.