ನವದೆಹಲಿ: ಲಿಫ್ಟ್ ಕೊಡುವ ನೆಪದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ದುರುಳನೊಬ್ಬ ಅತ್ಯಾಚಾರವೆಸಗಿದ್ದು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ರಾತ್ರಿ ಇಲೆಕ್ಟ್ರಿಕ್ ಸ್ಕೂಟಿಯಲ್ಲಿ ಬಂದಿದ್ದ ಆರೋಪಿ ಲಿಫ್ಟ್ ಕೊಡುವ ನೆಪದಲ್ಲಿ ಆಕೆಯನ್ನು ಕೂರಿಸಿಕೊಂಡಿದ್ದ. ಬಳಿಕ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರವೆಸಗಿದ್ದ.ಈ ಬಗ್ಗೆ ತಕ್ಷಣವೇ ಸಂತ್ರಸ್ತ ಬಾಲಕಿ ಪೊಲೀಸರಿಗೆ ಕರೆ ಮಾಡಿ ದೂರು ನೀಡಿದ್ದಳು. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳೀಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ ಆರೋಪಿಯನ್ನು ಸೆರೆ ಹಿಡಿದಿದ್ದಾರೆ.