ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಪಾಕಿಸ್ತಾನ ಕಲಾವಿದರು ಕೂಡಲೇ ತಮ್ಮ ದೇಶಕ್ಕೆ ತೆರಳಬೇಕು ಎನ್ನುವ ರಾಜ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ನವನಿರ್ಮಾಣ ಸೇನೆ ಬಹಿರಂಗ ಘೋಷಣೆಯಿಂದಾಗಿ ಎಚ್ಚೆತ್ತುಕೊಂಡ ಪಾಕ್ ನಟ ಫವಾದ್ ಖಾನ್ ರಹಸ್ಯವಾಗಿ ಪಾಕಿಸ್ತಾನಕ್ಕೆ ತೆರಳಿರುವುದು ಬಹಿರಂಗವಾಗಿದೆ. ಪಾಕಿಸ್ತಾನದ ಕಲಾವಿದರಲ್ಲಿ ಫವಾದ್ ಖಾನ್ ಪ್ರಮುಖರಾಗಿದ್ದು, ಎಂಎನ್ಎಸ್ ಪಕ್ಷದ ಟಾರ್ಗೆಟ್ ಆಗಿದ್ದರು ಎಂದು ಹೇಳಲಾಗುತ್ತಿದೆ. ಪಾಕ್ ಕಲಾವಿದರ ಮೇಲೆ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಕಾರ್ಯಕರ್ತರು ಹಲ್ಲೆ ಮಾಡುವ ಸಾಧ್ಯತೆಗಳಿವೆ ಎಂದು ಪೊಲೀಸ್