ಪ್ರಧಾನಮಂತ್ರಿ ನರೇಂದ್ರ ಮೋದಿ ಸಚಿವ ಸಂಪುಟ ಸಭೆಯ ಮಾಹಿತಿಗಳು ಬಹಿರಂಗವಾಗುವ ಸಾಧ್ಯತೆಗಳ ಹಿನ್ನೆಲೆಯಲ್ಲಿ, ಮೊಬೈಲ್ ಫೋನ್ಗಳ ಬಳಕೆಗೆ ನಿಷೇಧ ಹೇರಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ. ಕೇಂದ್ರ ಸಚಿವಾಲಯದ ಸಂಪುಟ ಕಾರ್ಯದರ್ಶಿ ಸಚಿವರುಗಳ ಆಪ್ತರಿಗೆ ಮಾಹಿತಿ ರವಾನಿಸಿ, ಸಚಿವ ಸಂಪುಟ ಸಭೆಯಲ್ಲಿ ಮೊಬೈಲ್ ತರುವುದನ್ನು ನಿಷೇಧಿಸಲಾಗಿದೆ ಎಂದು ನಿರ್ದೇಶನ ನೀಡಿದೆ. ಸಚಿವ ಸಂಪುಟ ಸಭೆ ನಡೆಯುವ ಸ್ಥಳಗಳಲ್ಲಿ ಸ್ಮಾರ್ಟ್ಫೋನ್ ಮತ್ತು ಮೊಬೈಲ್ ಫೋನ್ಗಳ ಬಳಕೆಗೆ ನಿಷೇಧ ಹೇರಲಾಗಿದ್ದರಿಂದ