ನವದೆಹಲಿ : ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಮಧ್ಯಂತರ ಜಾಮೀನು ನೀಡಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಲೋಕಾಯುಕ್ತ ಅರ್ಜಿ ಸಲ್ಲಿಸಿದೆ. ಅರ್ಜಿಯನ್ನು ತುರ್ತು ವಿಚಾರಣೆ ನಡೆಸುವಂತೆ ಎರಡು ಬಾರಿ ವಕೀಲರು ಮಂಗಳವಾರ ಮನವಿ ಮಾಡಿದರು. ಲೋಕಾಯುಕ್ತ ಪರ ವಕೀಲರು ಮೊದಲು ಸಿಜೆಐ ಡಿ.ವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠದ ಮುಂದೆ ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ, ಸಾಂವಿಧಾನಿಕ ಪೀಠದಲ್ಲಿ ಭಾಗಿಯಾಗುತ್ತಿದ್ದು ತುರ್ತು ವಿಚಾರಣೆ ಸಾಧ್ಯವಿಲ್ಲ,ಕಲಾಪ ಅಂತ್ಯದ