ವಿವಾದಾತ್ಮಕ ಹೇಳಿಕೆಗಳಿಂದ ಬಿಜೆಪಿ ನಾಯಕ ಸುಬ್ರಹ್ಮಣ್ಯಂ ಸ್ವಾಮಿ ಸದಾ ಚರ್ಚೆಯಲ್ಲಿರುತ್ತಾರೆ. ಇದೀಗ ಬಿಜೆಪಿ ಲೋಕಸಭೆ ಚುನಾವಣೆಯಲ್ಲಿ 220 ಅಥವಾ 230 ಸೀಟುಗಳ ಗೆಲುವಿಗೆ ಸೀಮಿತವಾದಲ್ಲಿ ಮೋದಿ ಎರಡನೇ ಬಾರಿಗೆ ಪ್ರಧಾನಿ ಪಟ್ಟ ಅಲಂಕರಿಸುವ ಸಾಧ್ಯತೆಗಳಿಲ್ಲ ಎಂದು ಹೇಳಿಕೆ ನೀಡಿ ಮೋದಿ ಮತ್ತು ಬಿಜೆಪಿ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 230 ಸೀಟುಗಳ ಹತ್ತಿರ ಗೆಲ್ಲಬಹುದಾಗಿದೆ.ಎನ್ಡಿಎ ಮೈತ್ರಿಕೂಟದ ಪಕ್ಷಗಳು 30 ಸ್ಥಾನಗಳಲ್ಲಿ ಗೆಲ್ಲುವ ಸಾಧ್ಯತೆಗಳಿವೆ.