ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಸದನಕ್ಕೆ ತ್ಯಾಜ್ಯಗಳಿಂದ ತಯಾರಿಸಲ್ಪಟ್ಟ ಜಾಕೆಟ್ ಅನ್ನು ಧರಿಸಿ ಬಂದಿದ್ದು ವಿಶೇಷವಾಗಿತ್ತು.ಸೋಮವಾರ ಮೋದಿ ಬೆಂಗಳೂರಿಗೆ ಬಂದಿದ್ದಾಗ ಜಾಕೆಟ್ ಅನ್ನು ಉಡುಗೊರೆಯಾಗಿ ನೀಡಿದ್ದರು. ಈ ಜಾಕೆಟ್ ಪ್ಲಾಸ್ಟಿಕ್ ಬಾಟಲಿಗಳಿಂದ ಮರುಬಳಕೆ ಮಾಡಲಾದ ವಸ್ತುಗಳಿಂದ ತಯಾರಿಸಲ್ಪಟ್ಟಿದೆ. ರಾಜ್ಯಸಭೆಯಲ್ಲಿ ತಿಳಿ ನೀಲಿ ಬಣ್ಣದ ಸದ್ರಿ ಜಾಕೆಟ್ನಲ್ಲಿ ಕಾಣಿಸಿಕೊಂಡಿದ್ದಾರೆ.ಭಾರತ ಸರ್ಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಬೆಂಗಳೂರಿನ ಮಾದವಾರದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಆಯೋಜಿಸಿದ್ದ