ನವದೆಹಲಿ : ಜವಾಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ಒಕ್ಕೂಟದ ಕಚೇರಿಯಲ್ಲಿ ವಿದ್ಯುತ್ ಹಾಗೂ ಇಂಟರ್ನೆಟ್ ಸ್ಥಗಿತಗೊಂಡಿದ್ದರಿಂದ ಇಂದು ರಾತ್ರಿ ಪ್ರದರ್ಶನಗೊಳ್ಳಬೇಕಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ನಿಷೇಧಿತ ಬಿಬಿಸಿ ಸಾಕ್ಷ್ಯಚಿತ್ರಕ್ಕೆ ಸ್ಥಗಿತಗೊಂಡಿದೆ.ವಿದ್ಯಾರ್ಥಿಗಳು ಸಾಕ್ಷ್ಯಚಿತ್ರ ಪ್ರದರ್ಶನವು ಇಂದು (ಮಂಗಳವಾರ) ರಾತ್ರಿ 9 ಗಂಟೆಗೆ ಪ್ರಾರಂಭಿಸಲು ಯೋಜಿಸಿದ್ದರು. ಆದರೆ ಜೆಎನ್ಯು ಆಡಳಿತ ಮಂಡಳಿ ಸ್ಕ್ರೀನಿಂಗ್ಗೆ ಅನುಮತಿ ನೀಡಿರಲಿಲ್ಲ. ಅಷ್ಟೇ ಅಲ್ಲದೇ ಸಾಕ್ಷ್ಯಚಿತ್ರ ಪ್ರದರ್ಶಿಸಿದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿಯೂ ಎಚ್ಚರಿಕೆ ನೀಡಿತ್ತು.ಸಾಕ್ಷ್ಯಚಿತ್ರವನ್ನು ವೀಕ್ಷಿಸಿದರೆ