ನವದೆಹಲಿ : ವಿದ್ಯುತ್ ಕೊರತೆಗೆ ಮೋದಿ ಸರ್ಕಾರವನ್ನು ದೂಷಿಸಲು ಸಾಧ್ಯವಿಲ್ಲ, ಇದಕ್ಕೆಲ್ಲಾ 60 ವರ್ಷಗಳ ಕಾಂಗ್ರೆಸ್ ಆಡಳಿತವೇ ಕಾರಣ ಎಂದು ಕಾಂಗ್ರೆಸ್ ನಾಯಕ ಪಿ. ಚಿದಂಬರಂ ವ್ಯಂಗ್ಯವಾಡಿದರು.ಹಲವಾರು ರಾಜ್ಯಗಳು ಕಲ್ಲಿದ್ದಲು ಕೊರತೆ ಸಮಸ್ಯೆಯನ್ನು ಅನುಭವಿಸುತ್ತಿದೆ. ಈ ಸಂದರ್ಭದಲ್ಲಿ ವಿದ್ಯುತ್ ಬಿಕ್ಕಟ್ಟನ್ನು ಪರಿಹರಿಸಲು ಪ್ಯಾಸೆಂಜರ್ ರೈಲುಗಳನ್ನು ರದ್ದುಗೊಳಿಸಿರುವ ಸರ್ಕಾರದ ಕ್ರಮದ ವಿರುದ್ಧ ಟ್ವೀಟ್ ಮಾಡಿ ಟೀಕಿಸಿದರು.ಹೇರಳವಾದ ಕಲ್ಲಿದ್ದಲು, ಹಾಗೂ ಉಷ್ಣ ಸ್ಥಾವರಗಳಲ್ಲಿ ಬಳಕೆಯಾಗದಷ್ಟು ಸಾಮರ್ಥ್ಯವಿದೆ. ಆದರೂ ದೇಶದಲ್ಲಿ ತೀವ್ರವಾದ ವಿದ್ಯುತ್ ಕೊರತೆ