ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್ ಅಂಟಿಸಿದ ಆರೋಪದಡಿ ಗುಜರಾತ್ನ 8 ಮಂದಿಯನ್ನು ಬಂಧಿಸಲಾಗಿದೆ. ಇದುವರೆಗೆ 185 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಎಪಿ, ಪ್ರಧಾನಿ ವಿರುದ್ಧ ದೇಶಾದ್ಯಂತ ಪೋಸ್ಟರ್ ಅಭಿಯಾನ ಆರಂಭಿಸಿ `ಮೋದಿ ಹಟಾವೋ, ದೇಶ್ ಬಚಾವೋ’ ಅಭಿಯಾನ ಆರಂಭಿಸಿದ ಕೇವಲ ಒಂದು ದಿನದ ನಂತರ ಈ ಬಂಧನವಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳು ಸರ್ಕಾರಿ