ನವದೆಹಲಿ : ರಷ್ಯಾ-ಉಕ್ರೇನ್ ಮೇಲೆ ಯುದ್ಧ ಆರಂಭಿಸುತ್ತಿದ್ದಂತೆ ಭಾರತ ಮಧ್ಯಪ್ರವೇಶಿಸಬೇಕೆಂಬ ಮಾತು ಕೇಳಿಬರುತ್ತಿತ್ತು.ಇದೀಗ ಮೂಲಗಳ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಜೊತೆ ಇಂದು ರಾತ್ರಿ ಮಾತುಕತೆಗೆ ಮುಂದಾಗಿದ್ದಾರೆ ಎಂದು ವರದಿಯಾಗಿದೆ.ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಅರಂಭಿಸುತ್ತಿದ್ದಂತೆ ಭಾರತದಲ್ಲಿರುವ ಉಕ್ರೇನ್ ರಾಯಭಾರಿ ಇಗೂರ್ ಪೋಲಿಖಾ, ಮೋದಿಯವರು ರಷ್ಯಾ ಅಧ್ಯಕ್ಷರಾದ ಪುಟಿನ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜೊತೆ ಮಾತುಕತೆ ನಡೆಸಬೇಕು. ಈಗಾಗಲೇ ಯುದ್ಧ ಆರಂಭವಾಗಿದೆ.