ಹೊಸದಿಲ್ಲಿ: ದೇಶದ ಪ್ರತಿಯೊಬ್ಬ ನಾಗರಿಕನಿಗೂ ವಿಶಿಷ್ಟ ಡಿಜಿಟಲ್ ಆರೋಗ್ಯ ಸಂಖ್ಯೆ ಒದಗಿಸುವಂಥ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್’ಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಚಾಲನೆ ನೀಡಿದ್ದಾರೆ. ಈ ಯೋಜನೆಯು ದೇಶದ ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆಯನ್ನು ತರಲಿದೆ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ. ವೀಡಿಯೋ ಕಾನ್ಫರೆನ್ಸ್ ಮೂಲಕ ಯೋಜನೆ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ, ಡಿಜಿಟಲ್ ಮೂಲಸೌಕರ್ಯವು ಈಗ ಭಾರತೀಯ ಜನಸಾಮಾನ್ಯನಿಗೆ ಪಡಿತರದಿಂದ ಆಡಳಿತದವರೆಗೆ ಎಲ್ಲವನ್ನೂ ಅತ್ಯಂತ ತ್ವರಿತ ಹಾಗೂ ಪಾರದರ್ಶಕವಾಗಿ ಒದಗಿಸುತ್ತಿದೆ.