ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದಲ್ಲಿ ಕ್ರಿಮಿನಲ್ಗಳ ವಿರುದ್ಧ ಕೈಗೊಂಡ ‘ಬುಲ್ಡೋಜರ್ ಅಭಿಯಾನ’ಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಅಲ್ಲದೆ, ‘ಈಗ ವಿರಮಿಸುವ ಸಮಯವಲ್ಲ. 2024ಕ್ಕೆ (ಲೋಕಸಭೆ ಚುನಾವಣೆಗೆ) ಸಿದ್ಧತೆ ಆರಂಭಿಸಿ’ ಎಂದು ಸೂಚನೆ ನೀಡಿದ್ದಾರೆ. ನೇಪಾಳ ಪ್ರವಾಸದಿಂದ ಮರಳಿದ ಕೂಡಲೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಅವರ ಸಚಿವ ಸಂಪುಟದ ಜತೆ ದಿಲ್ಲಿಯಲ್ಲಿ ಸಭೆ ನಡೆಸಿದ ಮೋದಿ,ರಾಜ್ಯದಲ್ಲಿ ಕಾನೂನು ಹಾಗೂ ಸುವ್ಯವಸ್ಥೆ ಸುಧಾರಿಸಿದೆ ಎಂದು ಅಭಿನಂದಿಸಿದರು.