ಉತ್ತರಾಖಂಡ್ನಲ್ಲಿ ಕೇಂದ್ರ ಸರಕಾರ ಹೇರಿದ ರಾಷ್ಟ್ರಪತಿ ಆಳ್ವಿಕೆಯನ್ನು ರದ್ದುಗೊಳಿಸಿದ ಹೈಕೋರ್ಟ್ ತೀರ್ಪನ್ನು ಸ್ವಾಗತಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಹೈಕೋರ್ಟ್ ತೀರ್ಪು ಪ್ರಧಾನಿ ಮೋದಿಗೆ ತೀವ್ರ ಮುಖಭಂಗವಾಗಿದ್ದು, ಇನ್ಮುಂದೆಯಾದರೂ ಚುನಾಯಿತ ಸರಕಾರಗಳಲ್ಲಿ ಮಧ್ಯ ಪ್ರವೇಶಿಸುವುದನ್ನು ನಿಲ್ಲಿಸಿ ಪ್ರಜಾಪ್ರಭುತ್ವವನ್ನು ಗೌರವಿಸಲಿ ಎಂದು ಹೇಳಿದ್ದಾರೆ. ಉತ್ತರಾಖಂಡ್ ಹೈಕೋರ್ಟ್ ತೀರ್ಪು ಮೋದಿ ಸರಕಾರಕ್ಕೆ ಮುಖಭಂಗವಾಗಿದೆ. ಚುನಾಯಿತ ಸರಕಾರಗಳಲ್ಲಿ ಮಧ್ಯಪ್ರವೇಶಿಸುವುದು ಬಿಟ್ಟು ಪ್ರಜಾಪ್ರಭುತ್ವಕ್ಕೆ ಗೌರವ ಕೊಡಲಿ ಎಂದು ಟ್ವೀಟ್ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ