ಬೆಂಗಳೂರು : ವಿಕ್ರಂ ಲ್ಯಾಂಡರ್ ಅನ್ನು ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಸಿ ಜಗತ್ತಿಗೆ ಸಾಧ್ಯವಾಗದ ಸಾಧನೆಯನ್ನು ಇದೀಗ ಇಸ್ರೋ ಮಾಡಿ ತೋರಿಸಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದು, ಇಸ್ರೋ ಕೇಂದ್ರ ಕಚೇರಿಗೆ ತೆರಳಿ ವಿಜ್ಞಾನಿಗಳನ್ನು ಅಭಿನಂದಿಸಲಿದ್ದಾರೆ. ಬ್ರಿಕ್ಸ್ ಶೃಂಗಸಭೆ ಹಿನ್ನೆಲೆ ನರೇಂದ್ರ ಮೋದಿ ಸದ್ಯ ದಕ್ಷಿಣ ಆಫ್ರಿಕಾದಲ್ಲಿ ಪ್ರವಾಸದಲ್ಲಿದ್ದಾರೆ. ಸಭೆಯ ನಡುವೆಯೂ ಮೋದಿ ಚಂದ್ರಯಾನ ಲ್ಯಾಂಡಿಂಗ್ ಪ್ರಕ್ರಿಯೆಯನ್ನು ಲೈವ್ ಆಗಿ