ಹೈದರಾಬಾದ್ : ತೆಲಂಗಾಣ ರಾಜಧಾನಿಗೆ ಆಗಮಿಸುತ್ತಿದ್ದರೂ ತಮ್ಮನ್ನು ಸ್ವಾಗತಿಸದೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಭೇಟಿಗಾಗಿ ಬೆಂಗಳೂರಿಗೆ ತೆರಳಿದ ಮುಖ್ಯಮಂತ್ರಿ ಕೆ.ಚಂದ್ರಶೇಖರರಾವ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಟಾಂಗ್ ನೀಡಿದ್ದಾರೆ. ಕುಟುಂಬಗಳು ನಡೆಸುವ ಪಕ್ಷಗಳು ಯಾವಾಗಲೂ ತಮ್ಮ ಪ್ರಗತಿಯ ಬಗ್ಗೆ ಮಾತ್ರವೇ ಯೋಚಿಸುತ್ತಿರುತ್ತವೆ. ಹೀಗಾಗಿ ಅಂತಹ ಪಕ್ಷಗಳು ದೇಶದ ಅತಿದೊಡ್ಡ ಶತ್ರುಗಳು ಎಂದು ಹರಿಹಾಯ್ದಿದ್ದಾರೆ.ಬೇಗಂಪೇಟ್ ವಿಮಾನ ನಿಲ್ದಾಣದಲ್ಲಿ ಗುರುವಾರ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ಅವರು,