ನವದೆಹಲಿ : ದಕ್ಷಿಣ ಆಫ್ರಿಕಾದಲ್ಲಿ ವೇಗವಾಗಿ ವ್ಯಾಪಿಸುತ್ತಿರುವ ರೂಪಾಂತರಿ ಒಮಿಕ್ರಾನ್ ವೈರಸ್ನಲ್ಲಿ ಮನುಷ್ಯನ ಸ್ವಾಭಾವಿಕ ರೋಗ ನಿರೋಧಕ ಶಕ್ತಿಯನ್ನು ಭೇದಿಸುವ ಶಕ್ತಿ ಅಧಿಕವಾಗಿದೆ ಎಂದು ದಕ್ಷಿಣ ಆಫ್ರಿಕಾದ ವಿಜ್ಞಾನಿಗಳು ನಡೆಸಿದ ಅಧ್ಯಯನದಲ್ಲಿ ಸಾಬೀತಾಗಿದೆ. ಡೆಲ್ಟಾ ಮತ್ತು ಬೀಟಾಗಿಂತ 3 ಪಟ್ಟು ಹೆಚ್ಚಿದೆ ಎಂದು ಅಧ್ಯಯನದಲ್ಲಿ ಪುರಾವೆ ಲಭ್ಯವಾಗಿದೆ ಎಂದು ಅವರು ಹೇಳಿದ್ದಾರೆ. ಆದರೆ ಮರು ಸೋಂಕಿಗೆ ತುತ್ತಾದವರ ಆರೋಗ್ಯದ ಗಂಭೀರತೆ ಕಾರಣ ಆಗುತ್ತದೆಯೇ ಮತ್ತು ಲಸಿಕೆ ಪಡೆದವರಲ್ಲಿ ಈ ಸೋಂಕು