ಮಕ್ಕಳಿಗೆ ವಿಷವುಣಿಸಿ ತಾನೂ ಸಾಯಲು ಹೊರಟ ತಾಯಿ

ಚೆನ್ನೈ| Krishnaveni K| Last Modified ಶುಕ್ರವಾರ, 30 ಏಪ್ರಿಲ್ 2021 (10:00 IST)
ಚೆನ್ನೈ: ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬಳು ತನ್ನ ಇಬ್ಬರು ಹೆಣ್ಣು ಮಕ್ಕಳಿಗೆ ವಿಷವುಣಿಸಿ ತಾನೂ ಸಾಯಲು ಹೊರಟ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
 > ಈ ಘಟನೆಯಲ್ಲಿ ಮಕ್ಕಳಿಬ್ಬರೂ ಸಾವನ್ನಪ್ಪಿದ್ದು, ಮಹಿಳೆಯನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. 9 ತಿಂಗಳ ಹಿಂದೆ ಮಹಿಳೆ ಗಂಡನಿಂದ ಬೇರ್ಪಟ್ಟು ತವರು ಮನೆ ಸೇರಿದ್ದಳು.>   ಇತ್ತೀಚೆಗೆ ಆಕೆಯ ತಾಯಿ, ಸಹೋದರರು ಮರಳಿ ಗಂಡನ ಮನೆಗೆ ಹೋಗುವಂತೆ ಒತ್ತಾಯಿಸುತ್ತಿದ್ದರು. ಈ ಸಂಬಂಧ ಆಗಾಗ ಆಕೆಗೂ ತವರು ಮನೆಯವರಿಗೂ ಕಲಹವಾಗುತ್ತಿತ್ತು. ಇದರಿಂದ ಬೇಸತ್ತ ಆಕೆ ಇಲಿ ಪಾಷಾಣ ನೀಡಿ ಮಕ್ಕಳಿಬ್ಬರನ್ನೂ ಸಾಯಿಸಿದ್ದಾಳೆ.ಇದರಲ್ಲಿ ಇನ್ನಷ್ಟು ಓದಿ :