ಹಿಂದೂ ಕಾರ್ಯಕರ್ತ ದೀಪಕ್ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿ ರಾಜ್ಯ ಬಿಜೆಪಿ ಸಂಸದರು ಸಂಸತ್ ಆವರಣದಲ್ಲಿರುವ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಸಂಸತ್ನ ಕಲಾಪ ಆರಂಭಕ್ಕೂ ಮುನ್ನ ಗಾಂಧಿ ಪ್ರತಿಮೆ ಮುಂದೆ ರಾಜ್ಯ ಸಂಸದರಾದ ಪ್ರಹ್ಲಾದ್ ಜೋಷಿ, ಶೋಭ ಕರಂದ್ಲಾಜೆ, ಸುರೇಶ್ ಅಂಗಡಿ, ಪಿ.ಸಿ.ಮೋಹನ್, ಪ್ರತಾಪ್ ಸಿಂಹ, ಶಿವಕುಮಾರ್ ಉದಾಸೀ ಇತರರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಹಾಕಿದ್ದಾರೆ. ಪ್ರತಿಭಟನಾ ಫಲಕ