ಮುಂಬೈ : ರಿಲಯನ್ಸ್ ಜಿಯೋ ನಿರ್ದೇಶಕರಾಗಿದ್ದ ಮುಖೇಶ್ ಅಂಬಾನಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ತಮ್ಮ ಹಿರಿಯ ಮಗ ಆಕಾಶ್ಗೆ ನಿರ್ದೇಶಕ ಸ್ಥಾನವನ್ನು ಹಸ್ತಾಂತರಿಸಿದ್ದಾರೆ.ಕಂಪನಿಯ ನಿರ್ದೇಶಕರ ಮಂಡಳಿ ಸೋಮವಾರ ನಡೆದ ಸಭೆಯಲ್ಲಿ ಎಕ್ಸಿಕ್ಯೂಟಿವ್ ಡೈರೆಕ್ಟರ್ ಆಕಾಶ್ ಅಂಬಾನಿ ಅವರನ್ನು ಕಂಪನಿಯ ಅಧ್ಯಕ್ಷರನ್ನಾಗಿ ನೇಮಿಸಲು ಅನುಮೋದನೆ ನೀಡಿದೆ. ಈ ಬಗ್ಗೆ ರಿಲಯನ್ಸ್ ಇನ್ಫೋಕಾಮ್ ಭಾರತೀಯ ಷೇರು ಮಾರುಕಟ್ಟೆಗಳಿಗೆ ಮಾಹಿತಿ ನೀಡಿದೆ. ಆಕಾಶ್ ಅಂಬಾನಿ ಅಮೆರಿಕದ ಬ್ರೌನ್ ವಿಶ್ವವಿದ್ಯಾನಿಲಯದಲ್ಲಿ ಅರ್ಥಶಾಸ್ತ್ರ ಪದವೀಧರರಾಗಿದ್ದು, ಅವರು ಹೊಸ