ಲಕ್ನೋ: ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಹೋಳಾಗಿ ಎಷ್ಟೋ ದಿನಗಳೇ ಕಳೆದಿವೆ. ಇದೀಗ ಮಗನ ಮೇಲಿನ ಮುನಿಸಿಗೆ ಮುಲಾಯಂ ಸಿಂಗ್ ಯಾದವ್ ಹೊಸ ಪಕ್ಷ ಸ್ಥಾಪನೆ ಮಾಡುವ ಸಾಧ್ಯತೆಯಿದೆ. ಇಂದು ಮುಲಾಯಂ ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಘೋಷಿಸಲಿದ್ದಾರೆ. ಮೂಲಗಳ ಪ್ರಕಾರ ಮುಲಾಯಂ ಹೊಸ ಪಕ್ಷ ಸ್ಥಾಪಿಸುವ ಸಾಧ್ಯತೆಯೇ ಹೆಚ್ಚು ಎನ್ನಲಾಗಿದೆ.ತಾವೇ ಸ್ಥಾಪಿಸಿದ ಪಕ್ಷದಿಂದ ಮುಲಾಯಂ ಪುತ್ರ ಅಖಿಲೇಶ್ ಯಾದವ್ ಜತೆಗಿನ ಭಿನ್ನಾಭಿಪ್ರಾಯದಿಂದ ಸಹೋದರ