ಮುಂಬೈ: ವಾಣಿಜ್ಯ ನಗರಿ ಮುಂಬೈನ ಕಮಲಾ ಮಿಲ್ಸ್ ಕಂಪೌಂಡ್ ನಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಅಗ್ನಿ ದುರಂತದಲ್ಲಿ 15 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಕಮಲಾ ಮಿಲ್ಸ್ ಕಂಪೌಂಡ್ ಬಹುಮಹಡಿ ಕಟ್ಟಡದ ಸುತ್ತಮುತ್ತ ಹಲವು ರೆಸ್ಟೋರೆಂಟ್ ಗಳು, ವಾಣಿಜ್ಯ ಕಚೇರಿಗಳು, ವಸತಿ ಗೃಹಗಳಿದ್ದು, ತಡರಾತ್ರಿ ಸುಮಾರು 3 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದಲ್ಲಿದ್ದವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.ಇಲ್ಲಿ ಪಾರ್ಟಿಯೊಂದು ನಡೆಯುತ್ತಿದ್ದ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೂ ಸೇರಿದ್ದಾರೆ.