ಮುಂಬೈನ ಎಲ್ಫಿಲ್ಟನ್ ರೈಲ್ವೇ ಸೇತುವೆಯಲ್ಲಿ ಇಂದು ಸಂಭವಿಸಿದ ಕಾಲ್ತುಳಿತದ ಘಟನೆಯಲ್ಲಿ 23 ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದ್ದು, ನೂರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೃತರಾದವರಿಗೆ ಮಹಾರಾಷ್ಟ್ರ ಸರಕಾರ 5 ಲಕ್ಷ ರೂ.ಪರಿಹಾರ ಘೋಷಿಸಿದೆ. ಜೋರಾಗಿ ಮಳೆ ಸುರಿಯುತ್ತಿದ್ದರಿಂದ, ಮಳೆಯಿಂದ ರಕ್ಷಣೆ ಪಡೆಯಲು ಸೇತುವೆ ಬಳಿಗೆ ಓಡುವಾಗ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಬೆಳಿಗ್ಗೆ ಸುಮಾರು 10.45 ರ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆಯಲ್ಲಿ 100 ಕ್ಕೂ ಹೆಚ್ಚು ಮಂದಿ