ಉತ್ತರ ಪ್ರದೇಶ ರಾಜಕೀಯದಲ್ಲಿ ತೀವ್ರ ಕೋಲಾಹಲ ಎಬ್ಬಿಸಿರುವ ವಿಚಾರವೆಂದರೆ ಅದು ಅಲ್ಪಸಂಖ್ಯಾತರ ಕಡೆಗಣನೆ. ಇತ್ತೀಚಿಗೆ ಸಮಾಜವಾದಿ ಪಕ್ಷದ ಹಿರಿಯ ನಾಯಕ ಹಾಗೂ ಶಾಸಕ ಅಜಂ ಖಾನ್ ಬೆಂಬಲಿಗರು ಈ ಬಗ್ಗೆ ಅಖಿಲೇಶ್ ಯಾದವ್ ವಿರುದ್ದ ಬಹಿರಂಗವಾಗಿ ತೊಡೆ ತಟ್ಟಿದ್ದರು ಮತ್ತು ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದ್ದರು. ಅದಕ್ಕೆ ಮುನ್ನುಡಿಯಾಗಿ ಸಮಾಜವಾದಿ ಪಕ್ಷದ ನಾಯಕ ಸಿಕಂದರ್ ಅಲಿ ಸಮಾಜವಾದಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಕುರಿತು ಮಾತನಾಡಿದ