ಗುಜರಾತ್ನಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬಿಜೆಪಿ ಪಕ್ಷದ ಸಂಸದೀಯ ಸಭೆಯಲ್ಲಿ ಭಾವುಕರಾಗಿ ಮಾತನಾಡಿದ್ದಾರೆ. ಗುಜರಾತ್, ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಗೆಲುವು ಸಾಧಿಸಿದ ನಂತರ ನಡೆದಿರುವ ಸಂಸದೀಯ ಸಭೆಯಲ್ಲಿ ಮಾತನಾಡಿದ ಅವರು. ಇಂದಿರಾ ಗಾಂಧಿ ಪ್ರಧಾನಮಂತ್ರಿ ಆಗಿದ್ದಾಗ ಕಾಂಗ್ರೆಸ್ 18 ರಾಜ್ಯಗಳಲ್ಲಿ ಅಧಿಕಾರದಲ್ಲಿತ್ತು. ಆದರೆ, ಬಿಜೆಪಿ 19 ರಾಜ್ಯಗಳಲ್ಲಿ ಅಧಿಕಾರದಲ್ಲಿರುವುದು ನಮಗೆ ಸಿಕ್ಕ ಅಭೂತಪೂರ್ವ ಜಯ ಎಂದು ಭಾವುಕರಾಗಿ ನುಡಿದ್ದಾರೆ.