ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಮೋದಿ ವಿಧಿವಶರಾಗಿದ್ದಾರೆ. ಕಳೆದ ಜೂನ್ ನಲ್ಲಿ 100 ವರ್ಷ ಪೂರೈಸಿದ್ದ ಮೋದಿ ತಾಯಿ, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಆದರೆ ಇಂದು ಬೆಳಗ್ಗಿನ ಜಾವ 3.39ರ ಸುಮಾರಿಗೆ ಅಹಮದಾಬಾದ್ನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಬುಧವಾರ ಅಹಮದಾಬಾದ್ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರ ಅವರ ಆರೋಗ್ಯ ಸುಧಾರಿಸಿರುವುದಾಗಿ ಆಸ್ಪತ್ರೆ ಮೂಲಗಳು ತಿಳಿಸಿದ್ದವು. ಹೀರಾಬೆನ್ ನಿಧನಕ್ಕೆ ಗಣ್ಯರೆಲ್ಲರೂ ಸಂತಾಪ ಸೂಚಿಸುತ್ತಿದ್ದಾರೆ. ಪ್ರಧಾನಿಯವರು ತಮ್ಮ