ಅಹ್ಮದಾಬಾದ್ : 2024ರ ಲೋಕಸಭೆ ಚುನಾವಣೆಯಲ್ಲೂ ನರೇಂದ್ರ ಮೋದಿಯವರೇ ಪ್ರಧಾನಿ ಅಭ್ಯರ್ಥಿ. ಮುಂದಿನ ಅವಧಿಗೂ ಖಂಡಿತ ಅವರೇ ಪ್ರಧಾನಮಂತ್ರಿಯಾಗಲಿದ್ದಾರೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಹಾಗೇ, ಪ್ರಧಾನಿ ಮೋದಿಯವರನ್ನು ಬಿಟ್ಟು ಇನ್ಯಾವ ನಾಯಕನೂ ಹೀಗೆ 20 ವರ್ಷಗಳಿಗಿಂತಲೂ ಹೆಚ್ಚಿನ ಕಾಲ ನಿರಂತರವಾಗಿ ಸಾಂವಿಧಾನಿಕ ಹುದ್ದೆಯಲ್ಲಿ ಇಲ್ಲ ಎಂದೂ ಅವರು ತಿಳಿಸಿದ್ದಾರೆ. ಗುಜರಾತ್ನ ಗಾಂಧಿನಗರದ ಪಾನ್ಸಾರ್ನಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ಅಕ್ಟೋಬರ್ 7ಕ್ಕೆ ಪ್ರಧಾನಿ ನರೇಂದ್ರ ಮೋದಿಯವರು