ನವದೆಹಲಿ : ನವದೆಹಲಿಯಲ್ಲಿ ನಿರ್ಮಾಣವಾಗುತ್ತಿರುವ ಹೊಸ ಸಂಸತ್ ಭವನಕ್ಕೆ ದಿಢೀರ್ ಭೇಟಿ ನೀಡಿ ಕಾಮಗಾರಿಯನ್ನು ಪ್ರಧಾನಿ ನರೇಂದ್ರ ಮೋದಿ ಪರಿಶೀಲಿಸಿದರು. ಒಂದು ಗಂಟೆಗೂ ಅಧಿಕ ಕಾಲ ಕಾಮಗಾರಿ ಪರಿಶೀಲನೆ ನಡೆಸಿದರು. ಹೊಸ ಲೋಕಸಭೆ ಮತ್ತು ರಾಜ್ಯಸಭೆ ಸದನದ ಒಳಾಂಗಣಕ್ಕೆ ತೆರಳಿ ವೀಕ್ಷಣೆ ನಡೆಸಿದರು. ಸೆಂಟ್ರಲ್ ವಿಸ್ಟಾ ಯೋಜನೆ ಭಾಗವಾಗಿ ಹೊಸ ಸಂಸತ್ ಭವನವನ್ನು ನಿರ್ಮಿಸಲಾಗುತ್ತಿದೆ. ತ್ರಿಕೋನಾಕಾರದ ಸಂಸತ್ ಭವನ ಇದಾಗಿದೆ. ಕಟ್ಟಡ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದ್ದು, ಕಟ್ಟಡದ ಒಳಾಂಗಣ