ಕರ್ನಾಟಕ ಸರ್ಕಾರವು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸುವ ರಾಜ್ಯದಲ್ಲಿ ಮೊದಲ ರಾಜ್ಯ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಕೇಂದ್ರ ಸರ್ಕಾರವು ಯುವಪೀಳಿಗೆಗೆ ಅನುಗುಣವಾಗಿ ರೂಪಿಸಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಶಿಕ್ಷಣ ಕ್ಷೇತ್ರದಲ್ಲೂ ಕರ್ನಾಟಕ ಎಂದೆಂದೂ ನಂಬರ್ ಒನ್ ಆಗಿರುವಂತೆ ಶ್ರಮಿಸಬೇಕು ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.ಇಂದಿನ ಪೀಳಿಗೆಗೆ ಅನುಗುಣವಾಗಿ, ಅತ್ಯಾಧುನಿಕ ಆವಿಷ್ಕಾರ, ತಂತ್ರಜ್ಞಾನಗಳಿಗೆ ತಕ್ಕಂತೆ ಆಧುನಿಕ ಶಿಕ್ಷಣಕ್ಕೆ