ನವದೆಹಲಿ : ಸೆಲೆಬ್ರಿಟಿಗಳು, ಸಿನಿಮಾ ನಟ-ನಟಿಯರು, ಪ್ರಭಾವಿ ವ್ಯಕ್ತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಜಾಹೀರಾತು ನೀಡುವುದು ಸಾಮಾನ್ಯ. ಆದರೆ ಇನ್ನು ಮುಂದೆ ಯಾವುದೇ ವಸ್ತು ಅಥವಾ ಸೇವೆಗಳನ್ನು ಪ್ರಚಾರ ಮಾಡುವಾಗ ಸೆಲೆಬ್ರಿಟಿ ಅಥವಾ ಪ್ರಭಾವಿ ವ್ಯಕ್ತಿಗಳು ಕೆಲ ಗೈಡ್ಲೈನ್ಸ್ ಅನ್ನು ಪಾಲಿಸಬೇಕೆಂದು ಕೇಂದ್ರ ತಿಳಿಸಿದೆ. ಸೆಲೆಬ್ರಿಟಿಗಳು ಹಾಗೂ ಪ್ರಭಾವಿ ವ್ಯಕ್ತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಉತ್ಪನ್ನ ಹಾಗೂ ಸೇವೆಗಳನ್ನು ಅನುಮೋದಿಸುವಾಗ ಕಡ್ಡಾಯವಾಗಿ ಎಂಡೋರ್ಸ್ಮೆಂಟ್ಸ್ ನೋ-ಹೌ ಎಂಬ ಹೊಸ ಮಾರ್ಗಸೂಚಿಯನ್ನು ಅನುಸರಿಸಬೇಕು ಎಂದು