ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮೂರನೇ ಹಂತದ ಪ್ಯಾಕೇಜ್ ಘೋಷಿಸಿದ್ದು, ಇದರಲ್ಲಿ ಕೃಷಿ ಮೂಲಸೌಕರ್ಯಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಕೃಷಿ ಮೂಲ ಸೌಕರ್ಯಾಭಿವೃದ್ಧಿ ನಿಧಿಗೆ 1 ಲಕ್ಷ ಕೋಟಿ ರೂ. ಮೀಸಲಿಡುವುದಾಗಿ ವಿತ್ತ ಸಚಿವೆ ಘೋಷಿಸಿದ್ದಾರೆ. ಜೇನು ಸಾಕಣೆಗೆ 500 ಕೋಟಿ ರೂ., ಪಶುಸಂಗೋಪನೆ, ಟೊಮ್ಯಾಟೋ, ಈರುಳ್ಳಿ, ಆಲೂಗಡ್ಡೆ ಬೆಳೆ ಸಂಸ್ಕರಣೆಗೆ 500 ಕೋಟಿ ರೂ. ಮತ್ತು ಸಾಗಾಟಕ್ಕೆ ಶೇ. 50 ರಷ್ಟು ಸಬ್ಸಿಡಿ ನೀಡುವುದಾಗಿ ಸಚಿವೆ ಘೋಷಿಸಿದ್ದಾರೆ.ವಿಶೇಷವಾಗಿ