ನವದೆಹಲಿ : ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ಕಾಶ್ಮೀರ ಸಮಸ್ಯೆಯನ್ನು ವಿಶ್ವಸಂಸ್ಥೆಗೆ ಕೊಂಡೊಯ್ಯುವ ಕೆಲಸವನ್ನು ಯಾಕೆ ಮಾಡಿದರು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಶ್ನಿಸಿದ್ದಾರೆ.ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ನೆಹರೂ ಅವರು ಕಾಶ್ಮೀರ ಸಮಸ್ಯೆಯನ್ನು ವಿಶ್ವಸಂಸ್ಥೆಗೆ ಕೊಂಡೊಯ್ಯುವ ಮೂಲಕ ಅದನ್ನು ಅಂತಾರಾಷ್ಟ್ರೀಯ ವಿಷಯವನ್ನಾಗಿಸಿದ್ದಾರೆ. ಇದು ಆಂತರಿಕ ವಿಚಾರವಾಗಿರುವುದರಿಂದ ಜಾಗತಿಕ ವೇದಿಕೆಗೆ ಹೋಗಬಾರದಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಮೊದಲ ಯುದ್ಧ ಪ್ರಾರಂಭವಾದ ನಂತರ 1948ರ