ನವದೆಹಲಿ : 23 ವಾರಗಳ ಭ್ರೂಣದ ಗರ್ಭಪಾತಕ್ಕೆ ಅವಕಾಶ ನೀಡುವಂತೆ ಕೋರಿ 25 ವರ್ಷದ ಅವಿವಾಹಿತ ಯುವತಿ ಸಲ್ಲಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾ ಮಾಡಿದೆ. ಸಮ್ಮತಿಯ ಸೆಕ್ಸ್ನಿಂದ ಗರ್ಭವತಿಯಾಗಿ 20 ವಾರಗಳು ಮೀರಿದ ಭ್ರೂಣದ ಗರ್ಭಪಾತಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಆದೇಶ ನೀಡಿದೆ. ಪ್ರಕರಣ ಸುದೀರ್ಘ ವಿಚಾರಣೆ ನಡೆಸಿದ ಮುಖ್ಯ ನ್ಯಾ.ಸತೀಶ್ ಚಂದ್ರಶರ್ಮಾ ನೇತೃತ್ವದ ವಿಭಾಗೀಯ ಪೀಠವು,ಒಪ್ಪಿಗೆಯ ಲೈಂಗಿಕ ಸಂಬಂಧದಿಂದ ಮಗುವನ್ನು ಹೆರುವ ಅವಿವಾಹಿತ ಮಹಿಳೆಗೆ