ನವದೆಹಲಿ : ಏಪ್ರಿಲ್ 18 ವರೆಗೂ ಹೊಸ ಮೀಸಲಾತಿ ನಿಯಮದ ಅನ್ವಯ ನೇಮಕಾತಿ ಮತ್ತು ಶೈಕ್ಷಣಿಕ ಪ್ರವೇಶಾತಿ ನೀಡದಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಮುಸ್ಲಿಂ ಸಮುದಾಯದ 4% ಮೀಸಲಾತಿ ರದ್ದು ಮಾಡಿದ ಸರ್ಕಾರದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ಸುದೀರ್ಘ ವಿಚಾರಣೆ ಇಂದು ನ್ಯಾ.ಕೆ.ಎಂ ಜೋಸೆಫ್ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ನಡೆಯಿತು.ಅರ್ಜಿದಾರ ಗುಲಾಮ್ ರಸೂಲ್ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ದುಷ್ಯಂತ್ ದವೆ,