ನವದೆಹಲಿ : ರಾಷ್ಟ್ರ ರಾಜಧಾನಿ ಸೇರಿದಂತೆ ಕೆಲ ರಾಜ್ಯಗಳಲ್ಲಿ ನಡೆಯುತ್ತಿರುವ ಮತೀಯ ಘರ್ಷಣೆಗಳ ಬಗ್ಗೆ ಇದೇ ಮೊದಲ ಬಾರಿ ಪರೋಕ್ಷವಾಗಿ ಪ್ರಸ್ತಾಪಿಸಿರುವ ಪ್ರಧಾನಿ ನರೇಂದ್ರ ಮೋದಿ,‘ಯಾವುದೇ ಕಾರಣಕ್ಕೂ ದೇಶದ ಸಮಗ್ರತೆ ಹಾಗೂ ಏಕತೆಯ ಜೊತೆ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ’ ಎಂದು ತೀಕ್ಷ್ಣವಾಗಿ ಹೇಳಿದ್ದಾರೆ.ಗುರುವಾರ ನಾಗರಿಕ ಸೇವೆಗಳ ದಿನಾಚರಣೆಯಲ್ಲಿ ಮಾತನಾಡಿದ ಪ್ರಧಾನಿ, ‘ನಮ್ಮದು ಪ್ರಜಾಪ್ರಭುತ್ವ ದೇಶ. ಇಲ್ಲಿ ಸಮಾನತೆ, ಜಾಗತೀಕರಣ ಹಾಗೂ ಏಕತೆ ಎಂಬ ಮೂರು ಸವಾಲುಗಳು ಇಂದು ನಮ್ಮ