ಉಸಿರಾಟ ತೊಂದರೆ ಮತ್ತು ಶ್ವಾಸಕೋಶ ಸಮಸ್ಯೆಯಿಂದ ಮಾಜಿ ಸಿಎಂ ಕುಮಾರಸ್ವಾಮಿ ನಿನ್ನೆ ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ವಾಸಕೋಶ ತಜ್ಞ ಡಾ. ಸತೀಶ್ ಚಿಕಿತ್ಸೆ ಕೊಡುತ್ತಿದ್ದಾರೆ. ಕಳೆದೊಂದು ವಾರದಿಂದ ಚಿತ್ರದುರ್ಗ ಮತ್ತು ಮೈಸೂರು ಜಿಲ್ಲೆಯಲ್ಲಿ ಕುಮಾರಸ್ವಾಮಿ ಪ್ರವಾಸ ಕೈಗೊಂಡಿದ್ದರು. ಈ ಸಂದರ್ಭ ಕಾರ್ಯಕರ್ತರು ಸಿಡಿಸಿದ ಪಟಾಕಿಗಳಿಂದ ಬಂದ ಧೂಳು ದೇಹಕ್ಕೆ ಸೇರಿ ಉಸಿರಾಟದ ತೊಂದರೆ ಉಂಟಾಗಿತ್ತು.