ನವದೆಹಲಿ : ಇನ್ಮುಂದೆ ನಿರ್ಬಂಧ ಇಲ್ಲದೇ ಅನಿವಾಸಿ ಭಾರತೀಯರು(ಎನ್ಆರ್ಐ) ವಾರ್ಷಿಕವಾಗಿ 10 ಲಕ್ಷ ರೂ. ಕಳುಹಿಸಬಹುದು. ವಿದೇಶಿ ದೇಣಿಗೆ ನಿಯಂತ್ರಣ ಕಾಯಿದೆಯ ಕೆಲವು ನಿಯಮಗಳಿಗೆ ಕೇಂದ್ರ ಗೃಹ ಸಚಿವಾಲಯ ತಿದ್ದುಪಡಿಗಳನ್ನು ಮಾಡಿದೆ. ದೇಣಿಗೆ ಮೊತ್ತ ಹೆಚ್ಚಳ ಮತ್ತು ಸ್ವೀಕಾರದ ಮಾಹಿತಿ ಸಲ್ಲಿಸುವ ಅವಧಿಯನ್ನು ಹೆಚ್ಚಿಸಲಾಗಿದೆ.ಈ ತಿದ್ದುಪಡಿಯಿಂದ ಸಂಬಂಧಿಕರಿಂದ ವಿದೇಶಿ ದೇಣಿಗೆ ಪಡೆಯುವ ವ್ಯಕ್ತಿಗಳು ಹಾಗೂ ಸಂಘ ಸಂಸ್ಥೆಗಳಿಗೆ ಅನುಕೂಲವಾಗಲಿದೆ.ಕೇಂದ್ರ ಗೃಹ ಸಚಿವಾಲಯ ಶುಕ್ರವಾರವೇ ಗೆಜೆಟ್ ಅಧಿಸೂಚನೆ ಪ್ರಕಟಿಸಿ 2022ರ