ನವದೆಹಲಿ: 69ನೇ ಗಣರಾಜ್ಯೋತ್ಸವ ಸಮಾರಂಭಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಸರ್ಕಾರ ಆಹ್ವಾನಿಸಿದೆ. ಆದರೆ, ಅವರಿಗೆ ಸರಿಯಾದ ಆಸನದ ವ್ಯವಸ್ಥೆ ಮಾಡಿಲ್ಲ. ಕಾಂಗ್ರೆಸ್ ನಾಯಕರಿಗೆ ಮುಜುಗರಕ್ಕೆ ಈಡುಮಾಡಲು ಮೋದಿ ಸರ್ಕಾರ ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನ ಕೆಲ ನಾಯಕರು ದೂರಿದ್ದಾರೆ.