ಮೋದಿಯ ಗುಜರಾತ್ ಮಾಡೆಲ್ಗೆ ಗುಜರಾತ್ ಜನತೆ ಗುಡ್ಬೈ ಹೇಳುವ ಕಾಲ ಸಮಯ ಸನ್ನಿಹಿತವಾಗಿದೆ ಎಂದು ಬಿಹಾರ್ ಮುಖ್ಯಮಂತ್ರಿ ನಿತಿಶ್ ಕುಮಾರ್ ಹೇಳಿದ್ದಾರೆ. ಗುಜರಾತ್ ರಾಜ್ಯದಲ್ಲಿ 20 ವರ್ಷಗಳಿಂದ ಅಧಿಕಾರದಲ್ಲಿದ್ದರೂ ಒಂದೇ ಒಂದು ಸ್ಮಾರ್ಟ್ ಸಿಟಿಯನ್ನು ನಿರ್ಮಿಸದ ಮೋದಿ, ಇದೀಗ ಮುಂಬರುವ ಐದು ವರ್ಷಗಳಲ್ಲಿ ದೇಶಾದ್ಯಂತ 100 ಸ್ಮಾರ್ಟ್ ಸಿಟಿಗಳನ್ನು ನಿರ್ಮಿಸುವುದಾಗಿ ಹೇಳುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ. ಚುನಾವಣಾ ಫಲಿತಾಂಶ ಗಮನಿಸಿದಲ್ಲಿ ಬಿಹಾರ್ ಮತ್ತು ದೆಹಲಿಯಲ್ಲಿ ಬಿಜೆಪಿ ಕುಸಿತದತ್ತ