ನವದೆಹಲಿ : ಪೆಗಾಸಸ್ ಸ್ಪೈವೇರ್ ಬಳಸಿ ದೇಶದ ಪ್ರಮುಖ ವ್ಯಕ್ತಿಗಳ ಮೇಲೆ ಅಕ್ರಮ ಕಣ್ಗಾವಲು ವಹಿಸುತ್ತಿರುವ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ಗೆ ತಜ್ಞರ ಸಮಿತಿ ವರದಿ ಸಲ್ಲಿಕೆ ಮಾಡಿದೆ.ಮೂರು ಭಾಗಗಳಲ್ಲಿ ವರದಿ ಸಲ್ಲಿಕೆಯಾಗಿದ್ದು, ತಾಂತ್ರಿಕ ಸಮಿತಿಯಿಂದ ಎರಡು ವರದಿಗಳು ಮತ್ತು ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಾಧೀಶ ಆರ್.ವಿ ರವೀಂದ್ರನ್ ಮೇಲ್ವಿಚಾರಣಾ ಸಮಿತಿಯಿಂದ ಒಂದು ವರದಿಯನ್ನು ಸಲ್ಲಿಸಲಾಗಿದೆ.ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ, ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರನ್ನೊಳಗೊಂಡ