ಉತ್ತರಪ್ರದೇಶ : ಈಗಾಗಲೇ ಬಿಹಾರದ ನಿತೀಶ್ ಕುಮಾರ್ ಹಾಗೂ ಪಶ್ಚಿಮ ಬಂಗಾಲದ ಮಮತಾ ಬ್ಯಾನರ್ಜಿ ಐಎನ್ಡಿಐಎ ಒಕ್ಕೂಟದಿಂದ ಹಿಂದೆ ಸರಿದಿದ್ದು, 80 ಲೋಕಸಭಾ ಕ್ಷೇತ್ರಗಳಿರುವ ಉತ್ತರಪ್ರದೇಶದಲ್ಲಿ ಈ ಬೆಳವಣಿಗೆ ಕಾಂಗ್ರೆಸ್ ಗೆ ಸಂದಿಗ್ದ ತಂದಿರಿಸಿದೆ. ಐಎನ್ಡಿಐಎ ಒಕ್ಕೂಟಕ್ಕೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ 11 ಕ್ಕಿಂತ ಹೆಚ್ಚು ಸ್ಥಾನಗಳನ್ನು ನೀಡಲು ಸಾಧ್ಯವಿಲ್ಲ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ. ಜೊತೆಗೆ, 62