ನವದೆಹಲಿ : ದೇಶಾದ್ಯಂತ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸರಕಾರ 1988ಕ್ಕೆ ಮಂಡಿಸಿದ್ದ ಭ್ರಷ್ಟಾಚಾರ ತಡೆ (ತಿದ್ದುಪಡಿ) ವಿಧೇಯಕಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಹಿ ಮಾಡಿದ್ದು, ಇಂದಿನಿಂದ ಈ ಕಾನೂನು ಜಾರಿಗೆ ಬರಲಿದೆ. ಈ ಹೊಸ ಕಾಯ್ದೆಯ ಪ್ರಕಾರ ಇನ್ನು ಮುಂದೆ ಲಂಚ ಪಡೆದವರಷ್ಟೇ ಅಲ್ಲದೇ, ಲಂಚ ಕೊಟ್ಟವರಿಗೂ ಶಿಕ್ಷೆ ವಿಧಿಸಬಹುದಾಗಿದೆ. ಲಂಚ ಕೊಡುವವನಿಗೆ ಕನಿಷ್ಠ ಮೂರು ವರ್ಷ ಶಿಕ್ಷೆ ನೀಡಲಾಗುವುದು ಇದನ್ನು ಏಳು ವರ್ಷಗಳ ವರೆಗೆ ವಿಸ್ತರಿಸಲು ಅವಕಾಶವಿದೆ.