ನವದೆಹಲಿ: ಕ್ವಿಟ್ ಇಂಡಿಯಾ ಚಳವಳಿಯ 70 ನೇ ವಾರ್ಷಿಕೋತ್ಸವ ಸಂದರ್ಭದಲ್ಲಿ ಸದುದ್ದೇಶಕ್ಕೆ ಬಳಕೆಯಾಗಬೇಕಿದ್ದ ವೇದಿಕೆ ರಾಜಕೀಯ ಕೆಸರೆರಚಾಟಕ್ಕೆ ವೇದಿಕೆಯಾಗಿದ್ದು ಮಾತ್ರ ವಿಪರ್ಯಾಸವಾಗಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಸಂಸತ್ತಿನಲ್ಲೇ ಪರೋಕ್ಷವಾಗಿ ಟಾಂಗ್ ಕೊಟ್ಟುಕೊಂಡಿದೆ. ಮೊದಲು ಮಾತನಾಡಿದ ಪ್ರಧಾನಿ ಮೋದಿ ಕ್ವಿಟ್ ಇಂಡಿಯಾ ಚಳವಳಿಯ ಬಗ್ಗೆ ಮಾತನಾಡುವಾಗ ಮೊದಲ ಪ್ರಧಾನಿ ಜವಹರಲಾಲ್ ನೆಹರೂ ಕೈ ಬಿಟ್ಟಿದ್ದರು. ಆ ಬಳಿಕ ಮಾತನಾಡಿದ ಸೋನಿಯಾ ಗಾಂಧಿ ಕೆಲವು ಕೋಮುವಾದಿ ಸಂಘಟನೆಗಳು ಕ್ವಿಟ್ ಇಂಡಿಯಾ ಚಳವಳಿಯನ್ನು