ನವದೆಹಲಿ(ಆ.10): ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದವರ (ಒಬಿಸಿ) ಪಟ್ಟಿಯನ್ನು ತಯಾರಿಸುವ ಹಕ್ಕನ್ನು ರಾಜ್ಯಗಳಿಗೆ ಮರಳಿಸುವ ಮಹತ್ವದ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಸೋಮವಾರ ಲೋಕಸಭೆಯಲ್ಲಿ ಮಂಡಿಸಿದೆ. ಈ ಮಸೂದೆಯನ್ನು ಪೂರ್ಣ ಪ್ರಮಾಣದಲ್ಲಿ ಬೆಂಬಲಿಸುವುದಾಗಿ 15 ವಿಪಕ್ಷಗಳು ಕೂಡ ಘೋಷಿಸಿರುವ ಕಾರಣ, ಮಸೂದೆ ಉಭಯ ಸದನಗಳಲ್ಲೂ ಶೀಘ್ರವೇ ಅಂಗೀಕಾರಗೊಂಡು ಕಾಯ್ದೆ ಸ್ವರೂಪ ಪಡೆಯುವ ಭರವಸೆ ಇದೆ. ಲೋಕಸಭೆಯಲ್ಲಿ ಸಂವಿಧಾನದ 127ನೇ ತಿದ್ದುಪಡಿ ಮಸೂದೆ ಮಂಡಿಸಿ ಮಾತನಾಡಿದ ಸಾಮಾಜಿಕ ನ್ಯಾಯ ಮತ್ತು