ನವಹದೆಲಿ : ದೇಶವು ಅಮೃತ ಮಹೋತ್ಸವದ ಸಂಭ್ರಮದಲ್ಲಿದ್ದು, ‘ದೇಶೀಯವಾಗಿ ಅಭಿವೃದ್ಧಿಪಡಿಸಲಾಗಿರುವ ಮೊದಲ ವಿಮಾನವಾಹಕ ಯುದ್ಧನೌಕೆ ‘ವಿಕ್ರಾಂತ್’ ಅನ್ನು ಸೆಪ್ಟೆಂಬರ್ 2ರಂದು ಪ್ರಧಾನಿ ನರೇಂದ್ರ ಮೋದಿ ಭಾರತೀಯ ನೌಕಾಪಡೆಗೆ ಅಧಿಕೃತವಾಗಿ ಸೇರ್ಪಡೆ ಮಾಡಲಿದ್ದಾರೆ.ಕೊಚ್ಚಿಯ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ (ಸಿಎಸ್ಎಲ್) 20 ಸಾವಿರ ಕೋಟಿ ರೂ. ವೆಚ್ಚದಲ್ಲಿ ತಯಾರಿಸಲಾದ ಯುದ್ಧ ನೌಕೆ ವಿಕ್ರಾಂತ್ ಅನ್ನು ಈಗಾಗಲೇ ಭಾರತೀಯ ನೌಕಾಪಡೆಗೆ ಹಸ್ತಾಂತರಿಸಲಾಗಿದ್ದು, ಅಂದು ಪ್ರಧಾನಿ ಅಧೀಕೃತವಾಗಿ ಸೇರ್ಪಡೆಗೊಳಿಸಲಿದ್ದಾರೆ.ಹಿಂದೂ ಮಹಾಸಾಗರ ಪ್ರದೇಶದಲ್ಲಿ ಭಾರತದ ಸ್ಥಾನವನ್ನು ಗಮನಾರ್ಹವಾಗಿ