ನವದೆಹಲಿ(ಜು.25): ಪ್ರಧಾನಿ ನರೇಂದ್ರ ಮೋದಿ ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದ ಮೂಲಕ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ. ತಿಂಗಳ ರೇಡಿಯೋ ಕಾರ್ಯಕ್ರಮದ 79ನೇ ಸರಣಿಯಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ಅಭಿಯಾನದಲ್ಲಿ ಪಾಲ್ಗೊಂಡು ಟೋಕಿಯೋ ಒಲಿಂಪಿಕ್ಸ್ನಲ್ಲಿ ಪಾಲ್ಗೊಂಡ ಎಲ್ಲಾ ಕ್ರೀಡಾಪಟುಗಳಿಗೆ ಸ್ಪೂರ್ತಿ ತುಂಬಿ ಎಂದು ಕರೆ ನೀಡಿದ್ದಾರೆ. * ಮೋದಿ ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮ * 79ನೇ ಸರಣಿಯಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ