ನವದೆಹಲಿ : ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡ ಕೊರೊನಾ ವೈರಸ್ ಹೊಸ ರೂಪಾಂತರಿ ತಳಿ ಓಮಿಕ್ರಾನ್ ಇದೀಗ ಭಾರತಕ್ಕೆ ಕಂಟಕವಾಗುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿದೆ. ಈಗಾಗಲೇ ದೇಶದಲ್ಲಿ 2 ಪ್ರಕರಣಗಳು ಪತ್ತೆಯಾಗಿವೆ. ಈ ನಡುವೆ ಕಳೆದ ನಾಲ್ಕು ದಿನಗಳಿಂದ ಭಾರತಕ್ಕೆ ಹೈರಿಸ್ಕ್ ದೇಶಗಳಿಂದ 7,976 ಮಂದಿ ಬಂದಿಳಿದಿದ್ದು, ಈ ಪೈಕಿ 12 ಮಂದಿಯಲ್ಲಿ ಕೊರೊನಾ ಕಂಡುಬಂದು ಆತಂಕ ಮೂಡಿಸಿದೆ. ಮಹಾರಾಷ್ಟ್ರ, ದೆಹಲಿ ಮತ್ತು ಉತ್ತರ ಪ್ರದೇಶದ ತಲಾ ನಾಲ್ವರಲ್ಲಿ ಸೋಂಕು ಕಂಡು