ಅತ್ಯಾಚಾರ ಪ್ರಕರಣದಲ್ಲಿ ದೋಷಿ ಬಾಬಾ ರಾಮ್ ರಹೀಮ್ಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿರುವುದನ್ನು ವಿರೋಧಿಸಿ ಆತನ ಭಕ್ತರು ಭಾರಿ ಪ್ರಮಾಣದಲ್ಲಿ ದಾಂಧಲೆಯಲ್ಲಿ ತೊಡಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಿರ್ಸಾದಲ್ಲಿ ಡೇರಾ ಸಚಾ ಸೌದಾ ಆಶ್ರಮದ ಬಳಿ ಬಾಬಾ ಬೆಂಬಲಿಗರು ಎರಡು ವಾಹನಗಳಿಗೆ ಬೆಂಕಿ ಹಚ್ಚಿದ್ದಲ್ಲದೇ ಕಲ್ಲು ತೂರಾಟದಲ್ಲಿ ತೊಡಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಿಕ್ಷೆ ಪ್ರಕಟಿಸುವುದಕ್ಕೂ ಮುಂಚೆಯೇ ತೀವ್ರ ಹಿಂಸಾಚಾರದಲ್ಲಿ ತೊಡಗಿದ ಭಕ್ತರು, ತೀರ್ಪು ಪ್ರಕಟವಾಗುತ್ತಿದ್ದಂತೆ ಮತ್ತಷ್ಟು