ಉತ್ತರ ಪ್ರದೇಶ: ಒಂದೂವರೆ ವರ್ಷದ ಮಗುವಿನ ಮೇಲೆ ಮದುವೆ ಸಮಾರಂಭಕ್ಕೆ ಬಂದಿದ್ದ ಸಂಬಂಧಿಕನೇ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯ ಪೋಹಿಯಾ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತಾಯಿಯೊಂದಿಗೆ ಮದುವೆಗೆ ಬಂದಿದ್ದ ಮಗುವನ್ನು ಸಂಬಂಧಿಕನೊಬ್ಬ ಯಾರಿಗೂ ತಿಳಿಯದಂತೆ ಸಮಾರಂಭ ನಡೆಯುತ್ತಿದ್ದ ಸ್ಥಳದಿಂದ ಎತ್ತುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಮಗು ಕಾಣದಿದ್ದಾಗ ಹುಡುಕಾಡಿದ ತಾಯಿಗೆ ಮಗು ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳದಿಂದ ಸುಮಾರು 400 ಮೀ. ದೂರದಲ್ಲಿದ್ದ ಪೊದೆಯೊಂದರ