ಭೋಪಾಲ್ : ಕಳೆದ ವರ್ಷ ನಮೀಬಿಯಾದಿಂದ ತಂದಿದ್ದ 8 ಚೀತಾಗಳ ಪೈಕಿ, ಕಿಡ್ನಿ ಸೋಂಕಿನಿಂದ ಬಳಲುತ್ತಿದ್ದ ಒಂದು ಚೀತಾ ಸಾವನ್ನಪ್ಪಿದೆ. ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಪರಿಚಯಿಸಲಾಗಿದ್ದ 8 ಚೀತಾಗಳ ಪೈಕಿ, ಕಿಡ್ನಿ ಸೋಂಕಿನಿಂದ ಬಳಲುತ್ತಿದ್ದ ಸಾಶಾ ಹೆಸರಿನ 3 ವರ್ಷದ ಚೀತಾ ಸೋಮವಾರ ಮೃತಪಟ್ಟಿದೆ. ಸಾಶಾ ಭಾರತಕ್ಕೆ ಕರೆತರುವ ಮುನ್ನವೇ ಅನಾರೋಗ್ಯದಿಂದ ಬಳಲುತ್ತಿತ್ತು ಎಂದು ಹೇಳಲಾಗಿದೆ. ಈ ವರ್ಷದ ಜನವರಿ 23ರಂದು ಸಾಶಾ ಚೀತಾದಲ್ಲಿ ಅನಾರೋಗ್ಯ ಲಕ್ಷಣಗಳು ಕಂಡುಬಂದಿತ್ತು.